Monday, August 10, 2026
Homeಕ್ರೈಮ್ಚಿಕ್ಕಮಗಳೂರು: ಹಣಕ್ಕಾಗಿ ಮಗಳನ್ನು ವೇಶ್ಯಾವಾಟಿಕೆ ಅಡ್ಡೆಗೆ ತಳ್ಳಿದ ಪಾಪಿ ತಂದೆ : 12 ಜನರ ಬಂಧನ!

ಚಿಕ್ಕಮಗಳೂರು: ಹಣಕ್ಕಾಗಿ ಮಗಳನ್ನು ವೇಶ್ಯಾವಾಟಿಕೆ ಅಡ್ಡೆಗೆ ತಳ್ಳಿದ ಪಾಪಿ ತಂದೆ : 12 ಜನರ ಬಂಧನ!

Telegram Group
Join Now

ಚಿಕ್ಕಮಗಳೂರು: ತಂದೆ ತಾಯಿಗಳು ಎಷ್ಟೇ ಕಷ್ಟಪಟ್ಟರು ತಮ್ಮ ಮಕ್ಕಳು ಸುಖವಾಗಿರಲಿ ಎಂದು ಬಯಸುತ್ತಾರೆ ಆದರೆ ಇಲ್ಲೋಬ್ಬ ಪಾಪಿ ತಂದೆಗೆ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಕಂಡುಬಂದಿದೆ.

ಹೌದು .. ತಾಯಿ ಇಲ್ಲದ ಅಪ್ರಾಪ್ತೆ ಮಗಳು ತಂದೆ ಹಾಗೂ ಅಜ್ಜಿ ಆಶ್ರಯದಲ್ಲೇ ಬೆಳೆಯುತ್ತಿದ್ದಳು. ಸಂಬಂಧಿಕರ ಮನೆಯಲ್ಲಿದ್ದ ಅಪ್ರಾಪ್ತೆ, PUC ವರೆಗೂ ವಿದ್ಯಾಭ್ಯಾಸ ಮುಗಿಸಿದ ನಂತರ ತಂದೆ ಮನೆಗೆ ಮರಳಿದ್ದಳು. ಈ ವೇಳೆ ಡಿಸೆಂಬರ್​ನಲ್ಲಿ ತಂದೆಯೊಂದಿಗೆ ಅಜ್ಜಿಯ ಮನೆಗೆ ಹೋಗಿ 2 ದಿನ ಉಳಿದು ಬಂದಿದ್ದಳು. ಆದರೆ ಅಜ್ಜಿ ಮತ್ತೆ ವಾಪಸ್‌ ಮನೆಗೆ ಕರೆದಿದ್ದರು ಆಗ ನೋಡಿ ಅಲ್ಲಿಯೇ ಪಾಪ ಆ ಹೆಣ್ಣುಮಗಳ ದುರ್ಘತಿ ಆರಂಭವಾಯಿತೆಂದೇ ಹೇಳಬಹುದು.

ಅದೇ ಸಂದರ್ಭದಲ್ಲಿ ಅಜ್ಜಿಯ ಮನೆಗೆ ಆಗಮಿಸಿದ್ದ ಭರತ್ ಶೆಟ್ಟಿ ಎಂಬಾತ ತಂದೆ- ಮಗಳೊಡನೆ ಸಲುಗೆ ಬೆಳೆಸಿದ್ದ. ಆತನ ಮನೆಗೆ ಬಂದು ತಂಗುವಂತೆಯೂ ತಿಳಿಸಿದ್ದ. ನಂತರ ಅಪ್ಪ ಹಾಗೂ ಅಜ್ಜಿಯ ಮಾತಿನಂತೆ ಮಂಗಳೂರಿಗೆ ಹೋಗಲು ಬಾಲಕಿಯನ್ನು ಒಪ್ಪಿಸಿ ಕಳುಹಿಸಿದ್ದಾರೆ.

ಮರುದಿನ ಅಪ್ರಾಪ್ತೆ ಬಳಿ ಬಂದ ಭರತ್, 4-5 ಜನ ಬರುತ್ತಾರೆ, ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಅವನ ಮಾತಿನಂತೆ 20ರಿಂದ ಹಿಡಿದು 45 ವರ್ಷ ವಯೋಮಿತಿಯ ನಾಲ್ವರು ಒಬ್ಬರಾದ ಮೇಲೊಬ್ಬರಂತೆ ಆಕೆಯನ್ನು ಲೈಂಗಿಕವಾಗಿ ಶೋಷಿಸಿದ್ದರು. ಇದಾದ ಮರುದಿನವೂ ಇದೇ ಕೆಲಸಕ್ಕೆ ಒತ್ತಾಯಿಸಿದಾಗ ಹುಡುಗಿ ನಿರಾಕರಿಸಿದರೂ ಮತ್ತೊಮ್ಮೆ ಆಕೆಯ ಮೇಲೆ ಅದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ವೇಳೆ ನಾನು ಅಪ್ರಾಪ್ತೆ, ನನ್ನನ್ನು ಬಿಡಿ ಎಂದು ಎಷ್ಟೇ ಅಂಗಲಾಚಿದರೂ ಕೇಳದ ಕಾಮುಕರು, ನಾವು ಭರತ್ ಶೆಟ್ಟಿಗೆ ಹಣ ನೀಡಿದ್ದೇವೆಂದು ಹೇಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು.

ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ FIR ದಾಖಲಾಗಿದ್ದು, ಬಾಲಕಿಯ ತಂದೆ, ಅಜ್ಜಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಂಸ ದಂಧೆಯ ಕಿಂಗ್‌ಪಿನ್ ಎನ್ನಲಾಗಿರುವ ಭರತ್ ಶೆಟ್ಟಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭರತ್ ಶೆಟ್ಟಿಯ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ವೇಶ್ಯಾವಾಟಿಕೆ ಸಂಬಂಧ 8ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಎಲ್ಲಾ ಆರೋಪಿಗಳನ್ನು ಪೋಕ್ಸೋ ಕಾಯ್ದೆ ಅಡಿ ಜೈಲಿಗಟ್ಟಲಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments