Monday, February 9, 2026
Homeಜಿಲ್ಲಾಸುದ್ದಿಅರಸು ಸಿಎಂ ದಾಖಲೆ ಮುರಿದ ಸಿದ್ದರಾಮಯ್ಯ: ಸಿಎಂ ಸಿದ್ದುಗೆ ಅಭಿನಂದನೆ ಸಲ್ಲಿಸಿದ ಶಾಸಕ T.D.ರಾಜೇಗೌಡ

ಅರಸು ಸಿಎಂ ದಾಖಲೆ ಮುರಿದ ಸಿದ್ದರಾಮಯ್ಯ: ಸಿಎಂ ಸಿದ್ದುಗೆ ಅಭಿನಂದನೆ ಸಲ್ಲಿಸಿದ ಶಾಸಕ T.D.ರಾಜೇಗೌಡ

ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಅವಧಿ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ, KREDL ಅಧ್ಯಕ್ಷರು ಹಾಗೂ ಶೃಂಗೇರಿ ಶಾಸಕರಾದ ಟಿ.ಡಿ. ರಾಜೇಗೌಡರು ಮತ್ತು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಭಾವಚಿತ್ರವನ್ನು ಗೌರವ ಸೂಚಕವಾಗಿ ಉಡುಗೊರೆಯಾಗಿ ನೀಡಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಟಿ. ಡಿ ರಾಜೇಗೌಡರು ಮುಂದಿನ ದಿನಗಳಲ್ಲಿ ಸಚಿವರಾಗುವ ಸಾಧ್ಯತೆ ದಟ್ಟವಾಗಿದೆ.

ಹಾಗೆ ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.

ಹೀಗಾಗಿಯೇ ಒಂದು ತಿಂಗಳ ಹಿಂದೆ ಸ್ವತಃ ಕೆ. ಜೆ ಜಾರ್ಜ್ ಅವರೇ ಟಿ. ಡಿ ರಾಜೇಗೌಡರನ್ನ ಉಸ್ತುವಾರಿ ಸಚಿವರನ್ನಾಗಿ ಮಾಡಿ, ಗೌಡರಿಗೆ ಎಲ್ಲಾ ಸಾಮರ್ಥ್ಯ, ಅನುಭವ ಇದೆ ಅನ್ನೋದನ್ನ ಹೇಳಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!