Wednesday, February 11, 2026
Homeಜಿಲ್ಲಾಸುದ್ದಿಎನ್‌ ಆರ್‌ ಪುರ: ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ನೇತೃತ್ವದ ಯುವ ಸಮ್ಮಿಲನ ಕಾರ್ಯಕ್ರಮ ಯಶಸ್ವಿ!

ಎನ್‌ ಆರ್‌ ಪುರ: ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ನೇತೃತ್ವದ ಯುವ ಸಮ್ಮಿಲನ ಕಾರ್ಯಕ್ರಮ ಯಶಸ್ವಿ!

ಎನ್‌ ಆರ್‌ ಪುರ: ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ನ ನರಸಿಂಹರಾಜಪುರ ಪಟ್ಟಣ ಘಟಕದ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಅವರ ನೇತೃತ್ವದಲ್ಲಿ ಯುವ ಸಮ್ಮಿಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಅವರು ಮಾತನಾಡಿ ಇಂದು ಈ ರೀತಿಯ ಯುವ ಸಮ್ಮಿಲನ ಕಾರ್ಯಕ್ರಮ ನಡೆಯುತ್ತಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ, ಯುವಕರಿಗೆ ಕಾಂಗ್ರೆಸ್ನ ತತ್ವ ಸಿದ್ಧಾಂತಗಳನ್ನು ತಿಳಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸುವುದರ ಮೂಲಕ ಈ ದೇಶವನ್ನು, ಹಾಗೂ ಅಂಬೇಡ್ಕರ್ ಮತ್ತು ಗಾಂಧೀಜಿಯವರನ್ನು ಪ್ರೀತಿಸುವ ಮೂಲಕ ಯುವ ಸಮುದಾಯ ಈ ಮಹಾನ್ ನಾಯಕರುಗಳು ಹಾಕಿಕೊಟ್ಟಂತಹ ದಾರಿಯಲ್ಲಿ ಸಾಗಬೇಕೆಂದು ತಿಳಿಸಿದರು, ರಾಜಕೀಯದಲ್ಲಿ ಯುವಕರ ಪ್ರಾತ್ರ ಅತ್ಯಂತ ಯುವಕರು ರಾಜಕೀಯದಲ್ಲಿ ಬೆಳೆಯಬೇಕೆಂದರೆ ಇಂತಹ ಸಂಘಟನಾತ್ಮಕ ಕೆಲಸ ಮಾಡಬೇಕೆಂದು ತಿಳಿಸಿದರು, ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೆ ಸಿಗುತ್ತದೆ ಅದಕ್ಕಾಗಿ ನಾವು ಪ್ರಾಮಾಣಿಕವಾಗಿ ಶ್ರಮ ಹಾಕಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಾನಂದ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಂಜೇಶ್ ಬೀಳುವ, ಮೊಹಮ್ಮದ್ ತಯೀಬ್, ಅಕ್ಸಿರ, ಕ್ಷೇತ್ರ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಕಾರ್ತಿಕ್ ಕಾರ್ಗದ್ದೆ, ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ಸಾಜು, ಪಟ್ಟಣ ಕಾಂಗ್ರೆಸ್ ಅಧ್ಯಕ್ಷರಾದ ಉಪೇಂದ್ರ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಬೆನ್ನಿ, ಪಟ್ಟಣ ಪಂಚಾಯತ್ ಮಾಜಿ ಸದಸ್ಯರು ಗಳಾದ ಪ್ರಶಾಂತ್ ಶೆಟ್ಟಿ, ಮತ್ತು ಜುಬೇದ ಹಾಗೂ ಅತೀ ಹೆಚ್ಚಿನ ಸಂಖ್ಯೆಯ ಯುವ ಮಿತ್ರರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!