Tuesday, August 11, 2026
Homeಕ್ರೈಮ್ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಓರ್ವ ಆರೋಪಿ ಅರೆಸ್ಟ್!

ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಓರ್ವ ಆರೋಪಿ ಅರೆಸ್ಟ್!

Telegram Group
Join Now

ಮೂಡಿಗೆರೆ: ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ಬಳಿಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯಕ್ಷಿತ್ ರಾಜ್‌ನನ್ನು ಬಂಧಿಸಲಾಗಿದೆ. ಆರೋಪಿಯು ಶಾಸಕಿ ವಿರುದ್ಧ ಮರುಮರು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದು, ಅವರ ಗೌರವಕ್ಕೆ ಧಕ್ಕೆ ತರುವ ಉದ್ದೇಶ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಒಂದು ಖಾತೆಯಾದರೆ ರಾಜಕೀಯ ವಿಚಾರ ಹಂಚಿಕೊಳ್ಳಲು ಮತ್ತೊಂದು ಖಾತೆ. ಖಾಸಗಿ ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳುತ್ತಿದ್ದ ವೈಯಕ್ತಿಕ ಖಾತೆಯಲ್ಲಿ ಬಟ್ಟೆ ಬಗ್ಗೆ ಕಿಡಿಗೇಡಿಗಳು ಅಶ್ಲೀಲ ಕಾಮೆಂಟ್​​ ಮಾಡಿದ್ದಾರೆ. ಈ ಕುರಿತು ಮೋಟಮ್ಮ ಅವರ ಪಿಎ ಸಂಸುದ್ದೀನ್ ಅವರು ಕಳೆದ ಅಕ್ಟೋಬರ್ ತಿಂಗಳಲ್ಲೇ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಆರೋಪಿಯು ನಿರಂತರವಾಗಿ ಶಾಸಕಿ ಅವರ ಬಟ್ಟೆ ವಿಚಾರವಾಗಿ ಅಶ್ಲೀಲವಾಗಿ ಕಾಮೆಂಟ್ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸುವ ಪ್ರಯತ್ನ ನಡೆಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments