Saturday, February 7, 2026
Homeಕ್ರೈಮ್ಶಿವಮೊಗ್ಗ: ಸ್ವಿಫ್ಟ್ ಕಾರು & KSRTC ಬಸ್‌ ನಡುವೆ ಭೀಕರ ಅಪಘಾತ: ಮಗು ಸೇರಿ ಮೂವರ...

ಶಿವಮೊಗ್ಗ: ಸ್ವಿಫ್ಟ್ ಕಾರು & KSRTC ಬಸ್‌ ನಡುವೆ ಭೀಕರ ಅಪಘಾತ: ಮಗು ಸೇರಿ ಮೂವರ ಸಾವು!

ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.

ರಿಯಾಜ್ ಅಹಮದ್ ಹಾಗೂ ಫಾತಿಮಾ ಮೃತರು. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. 

ಮೃತದೇಹ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!