ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಭಕ್ತರಿಗೆ ಅಯ್ಯಪ್ಪನ ದರ್ಶನವಾಯಿತು. ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಉದ್ಭವಿಸುವ ಮಕರ ಜ್ಯೋತಿಯನ್ನ (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು.

ಹೌದು. ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು. ಸಂಜೆ 6:43 ರಿಂದ 6:46ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಭಕ್ತರು ಜ್ಯೋತಿ ಕಣ್ತುಂಬಿಕೊಂಡರು.
