Friday, July 3, 2026
Homeಜಿಲ್ಲಾಸುದ್ದಿಶೃಂಗೇರಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಗುಂಬೆ ಗಣೇಶ್ ಹೆಗ್ಡೆ ಅಧಿಕಾರ ಸ್ವೀಕಾರ

ಶೃಂಗೇರಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಗುಂಬೆ ಗಣೇಶ್ ಹೆಗ್ಡೆ ಅಧಿಕಾರ ಸ್ವೀಕಾರ

Telegram Group
Join Now

ಶೃಂಗೇರಿ: ತಾಲೂಕಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸೇವಾ ದೀಕ್ಷೆ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕಷರಾದ ಶೃಂಗೇರಿ ಸುಬ್ಬಣ್ಣನವರು ಆಗುಂಬೆ ಗಣೇಶ್ ಹೆಗ್ಡೆಯವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಶೃಂಗೇರಿ ಸುಬ್ಬಣ್ಣನವರು ಇನ್ಮುಂದೆ ಜಿಲ್ಲಾ ಪ್ರಧಾನ ಸಂಚಾಲಕರಾಗಿ ನಿಯುಕ್ತಿಗೊಂಡಿದ್ದಾರೆ. ಎಲ್ಲಾ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಎಸ್ ಎಸ್ ವೆಂಕಟೇಶ್‌ರವರು ಪ್ರತಿಜ್ಞಾವಿಧಿ ಭೋಧಿಸಿದರು. ಸಾಹಿತಿಗಳು ಹಾಗೂ ಸಮಾಜ ಸೇವಕ ಡಾ.ಬಿ ಶಿವಶಂಕರ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ವಿವಿಧ ಸಂಘ,ಘಟಕಗಳ ಪ್ರಮುಖರಿಂದ ನೂತನ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಸಂಚಾಲಕರಿಗೆ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪ್ರಧಾನಕಾರ್ಯದರ್ಶಿಗಳಾದ ಶೂನ್ಯ ರಮೇಶ್,ಸುನೀತ ನವೀನ್ ಗೌಡ,ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಲ ಆನಂದಸ್ವಾಮಿ,ಸಂಘಟನಾ ಕಾರ್ಯದರ್ಶಿ ಆನಂದಸ್ವಾಮಿ,ಹೋಬಳಿ ಘಟಕದ ಅಧ್ಯಕ್ಷ ದಿನೇಶ್ ಅಂಗುರ್ಡಿ,ಯುವ ಘಟಕದ ತಾಲೂಕು ಅಧ್ಯಕ್ಷ ಸಚಿನ್ ಗುಬ್ಬಗೋಡು ಸೇರಿದಂತೆ ವಿವಿಧ ಘಟಕದ ಎಲ್ಲಾ ಪದಾಧಿಕಾರಿಗಳು,ಕನ್ನಡಾಭಿಮಾನಿಗಳು ಹಾಜರಿದ್ದರು

ವರದಿ: ವಿಠಲ್‌ ಶೃಂಗೇರಿ

7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments