Wednesday, August 12, 2026
Homeಬ್ರೇಕಿಂಗ್ ನ್ಯೂಸ್ಬಿಗ್‌ ಬಾಸ್‌ 12ರ ವಿನ್ನರ್‌ ಗಿಲ್ಲಿ ನಟನಿಗೆ ಕೇಂದ್ರ ಸಚಿವ HDK ಅಭಿನಂದನೆ!

ಬಿಗ್‌ ಬಾಸ್‌ 12ರ ವಿನ್ನರ್‌ ಗಿಲ್ಲಿ ನಟನಿಗೆ ಕೇಂದ್ರ ಸಚಿವ HDK ಅಭಿನಂದನೆ!

Telegram Group
Join Now

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್‌ ಗಿಲ್ಲಿ ನಟನಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಹೆಚ್‌ಡಿಕೆ, ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು ಎಂದಿದ್ದಾರೆ.

ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ ಮತ್ತು ಹೆಸರು ಬರಲಿ ಎಂದು ಕುಮಾರಸ್ವಾಮಿಯವರು ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಸಚಿವರು ತಮ್ಮ ಪ್ರಕಟಣೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಗಿಲ್ಲಿ ವಿನ್‌ ಆಗ್ತಿದ್ದಂತೆ ತವರಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಜನರು ಮತ್ತು ಅಭಿಮಾನಿಗಳು ವಿನ್ನರ್‌ಗೆ ಅದ್ಧೂರಿ ಸ್ವಾಗತ ಕೋರಲು ತವರು ಮಳವಳ್ಳಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಗಿಲ್ಲಿ ನಟನಿಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments