Tuesday, August 11, 2026
Homeಜಿಲ್ಲಾಸುದ್ದಿಕೊಟ್ಟಿಗೆಹಾರ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ!

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ!

Telegram Group
Join Now

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಬಿದ್ರುತಳ ಭಾಗದಲ್ಲಿ ರವಿವಾರ ರಾತ್ರಿ ಅರಣ್ಯ ಅಗ್ನಿ ಅವಘಡ ಸಂಭವಿಸಿದೆ.

ರಸ್ತೆಯಿಂದ ಸುಮಾರು ಒಂದುರಿಂದ ಎರಡು ಕಿಲೋಮೀಟರ್ ದೂರದ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅರಣ್ಯದಲ್ಲಿ ಹೊತ್ತಿಕೊಂಡ ಅಗ್ನಿಯ ಜ್ವಾಲೆಗಳು ದೂರದಿಂದಲೇ ಕಾಣಿಸಿಕೊಂಡಿದ್ದು, ಇದರಿಂದಾಗಿ ಪ್ರದೇಶದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳಿಗೆ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಗ್ನಿ ನಂದಿಸುವ ಸಲುವಾಗಿ ಅಗ್ನಿಶಾಮಕ ದಳವನ್ನು ಕರೆಸಿ ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments