ಚಿಕ್ಕಮಗಳೂರು: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ನಗರದ ಹೊರವಲಯದ ಉಂಡೇದಾಸರಹಳ್ಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗಿನ ಜಾವ ದಾಳಿ ನಡೆಸಿದ ಪೊಲೀಸರು, ಗಿರೀಶ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಸುಮಾರು 20ಸಾವಿರ ಮೌಲ್ಯದ 1.220 ಕೆಜಿ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ನಗರ ಪೊಲೀಸ್ ಠಾಣಾಧಿಕಾರಿ ಅಭಯ್‌ಪ್ರಕಾಶ್ ಸೋಮನಾಳ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾದ ತಂಡದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
