Wednesday, February 11, 2026
Homeಕ್ರೈಮ್ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ ಕಿಡಿಗೇಡಿ ಅರೆಸ್ಟ್!

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ ಕಿಡಿಗೇಡಿ ಅರೆಸ್ಟ್!

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ

ಜ.17ರಂದು ಹಾಸನದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ಮೂರು ದಿನಗಳ ಬಳಿಕ ಆಗಂತುಕನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!