Sunday, August 16, 2026
Homeಕ್ರೈಮ್BREAKING: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್: ಚಿಕ್ಕಮಗಳೂರು ಮೂಲದ ಮಹಿಳೆ ಅರೆಸ್ಟ್!

BREAKING: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್: ಚಿಕ್ಕಮಗಳೂರು ಮೂಲದ ಮಹಿಳೆ ಅರೆಸ್ಟ್!

Telegram Group
Join Now

ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರ ಅರೆಸ್ಟ್‌ ಮಾಡಿದ್ದಾರೆ.

ಹೌದು ..ಚಿಕ್ಕಮಗಳೂರು ಮೂಲದ ಮಹಿಳೆ ಸ್ಪೂರ್ತಿ ಎಂಬಾಕೆ ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರಿಂದ 4.5 ಲಕ್ಷ ರೂ ಪಡೆದಿದ್ದು, ಮತ್ತೆ ಒಂದು ಕೋಟಿ ಕೊಡಬೇಕೆಂದು ತನ್ನ ಸಹಚರರ ಜೊತೆ ಸೇರಿ ಬೆದರಿಕೆ ಹಾಕಿದ್ದಳು. ಮಹಿಳೆ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಮಾಡಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.‌

ಎರಡು ವರ್ಷಗಳ ಹಿಂದೆ ಇದೇ ಸ್ವಾಮೀಜಿ ಹನಿಟ್ರ್ಯಾಪ್‌ ಯತ್ನ ನಡೆದಿತ್ತು. ಈ ವೇಳೆ ಆರು ಕೋಟಿ ರೂ. ಬೇಡಿಕೆ ಇಟ್ಟ ಮೂವರನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದರು. ಇದೀಗ ಮತ್ತೆ ಬ್ಲ್ಯಾಕ್‌ಮೇಲ್‌ ಶುರುವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments