Wednesday, March 25, 2026
Homeಕ್ರೈಮ್ಕಾರ್ಕಳ: ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರ ಸಾವು,ಆರು ಮಂದಿಗೆ ಗಾಯ

ಕಾರ್ಕಳ: ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರ ಸಾವು,ಆರು ಮಂದಿಗೆ ಗಾಯ

ಉಡುಪಿ: ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ವಿರುದ್ಧ ದಿಕ್ಕಿನಲ್ಲಿ ನುಗ್ಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್‌ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!