Saturday, February 7, 2026
Homeಕ್ರೈಮ್ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ:ಕೆಲಕಾಲ ಸಂಚಾರ ಅಸ್ತವ್ಯಸ್ತ

ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ:ಕೆಲಕಾಲ ಸಂಚಾರ ಅಸ್ತವ್ಯಸ್ತ

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ.

ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!