ಚಿಕ್ಕಮಗಳೂರು : ಕಾಫಿನಾಡಲ್ಲಿ ಸಂಭ್ರಮದ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ರೂಪುಗೊಂಡಿತ್ತು.
ಹೌದು .. ಇಂಧನ ಸಚಿವ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕೆ.ಜೆ.ಜಾರ್ಜ್ ಅವರಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಹಾಗೆ ಧ್ವಜಾರೋಹಣಕ್ಕೂ ಮುನ್ನ ಅಂಬೇಡ್ಕರ್ ಭಾವಚಿತ್ರಕ್ಕೆ ಸಹ ಪುಷ್ಪನಮನ ಸಲ್ಲಿಸಿದ್ದರು.
ಅದೇ ರೀತಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪೊಲೀಸ್ ತುಕಡಿಗಳಿಂದ ಆಕರ್ಷಕ ಪಥಸಂಚಲನ ಕೂಡ ನಡೆಯಿತಿ.
ಈ ವೇಳೆ ಶಾಸಕ ತಮ್ಮಯ್ಯ, ಸಿ.ಟಿ.ರವಿ, ಎಂ.ಕೆ.ಪ್ರಾಣೇಶ್, ಭೋಜೇಗೌಡ ಸೇರಿ ಅಧಿಕಾರಿಗಳು ಮತ್ತು ಗಣ್ಯರು ಭಾಗಿಯಾಗಿದ್ದರು.
