ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಗ್ರಾಮ ಪಂಚಾಯಿತಿ ಅವಧಿ 2026ರ ಜನವರಿಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದೆ.ಅವಧಿ ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2026ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿದೆ.

ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಚುನಾವಣೆ ಆಯೋಗವು ಮಾಡಿಕೊಳ್ಳಬೇಕಾಗಿದೆ.
ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ. ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಕೋರಿದ್ದಾರೆ.
ಬಹುತೇಕ ಗ್ರಾಮ ಪಂಚಾಯಿತಿಗಳ ಮಾರ್ಚ್-2026 ರ ವೇಳೆಗೆ ಮುಕ್ತಾಯ ಆಗುತ್ತಿದ್ದು 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಇಲಾಖೆ ಸೂಚಿಸಿದೆ.
ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿದೆ.
