Thursday, March 26, 2026
Homeಜಿಲ್ಲಾಸುದ್ದಿಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ: ಚಾಲಕ ಆರೀಫ್ ಬಣಕಲ್ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ

ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ: ಚಾಲಕ ಆರೀಫ್ ಬಣಕಲ್ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ

ಕೊಟ್ಟಿಗೆಹಾರ: ಹೆರಿಗೆ ನೋವಿನಿಂದ ಆಸ್ಪತ್ರೆಗೆ ಸಾಗುತ್ತಿದ್ದ ವೇಳೆ ಮಾರ್ಗಮಧ್ಯೆ ಆ್ಯಂಬುಲೆನ್ಸ್​ನಲ್ಲೇ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ಇಂದು ನಡೆದಿದೆ.

ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದಂಪತಿಗಳು ಕೆಲಸ ಮಾಡುತ್ತಿದ್ದರು. ಗರ್ಭಿಣಿಯಾಗಿದ್ದ ಮಹಿಳೆಗೆ ಭಾನುವಾರ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಆ್ಯಂಬುಲೆನ್ಸ್ ಆಸ್ಪತ್ರೆ ತಲುಪುವಷ್ಟರಲ್ಲಿ ಮಹಿಳೆಗೆ ಹೆರಿಗೆ ನೋವು ತೀವ್ರಗೊಂಡಿದೆ.

ಇದನ್ನು ಅರಿತ ಆ್ಯಂಬುಲೆನ್ಸ್ ಚಾಲಕ ಆಸ್ಪತ್ರೆಗೆ ತಲುಪಲು ಇನ್ನು ಕೆಲವು ಸಮಯ ಬೇಕಾಗಿದ್ದರಿಂದ, ವಾಹನವನ್ನು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸಿ ಮಹಿಳೆಯ ಹೆರಿಗೆಗೆ ನೆರವಾಗಿದ್ದಾರೆ.

ಆ್ಯಂಬುಲೆನ್ಸ್ ನಲ್ಲೇ ಗಂಡು ಮಗುವಿನ ಜನನವಾಗಿದ್ದು, ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ಆ್ಯಂಬುಲೆನ್ಸ್ ಚಾಲಕನ ಈ ಸಮಯ ಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!