Sunday, August 16, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: DCC ಬ್ಯಾಂಕ್‌ ಅಧ್ಯಕ್ಷರಾಗಿ ಸಿಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಆಯ್ಕೆ

ಚಿಕ್ಕಮಗಳೂರು: DCC ಬ್ಯಾಂಕ್‌ ಅಧ್ಯಕ್ಷರಾಗಿ ಸಿಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಆಯ್ಕೆ

Telegram Group
Join Now

ಚಿಕ್ಕಮಗಳೂರು:ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು.

ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹಾಗೂ ದಿವಂಗತ ಎಸ್.ಎಲ್. ಧರ್ಮೇಗೌಡ ಅವರ ಪುತ್ರ ಸೋನಾಲ್ ಆಯ್ಕೆಯಾಗಿದ್ದಾರೆ.

ಜಿಲ್ಲೆಯಲ್ಲಿ ಐವರು ಶಾಸಕರು ಹಾಗೂ ಮೂರು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ಸ್ಥಾನ ಗಳಿಸಲು ಸಾಧ್ಯವಾಗದೆ ಶೂನ್ಯಕ್ಕೆ ಕುಸಿದಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ಜಯಗಳಿಸಿರುವ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಪಟ್ಟ ಒಲಿದಿರುವುದು ವಿಶೇಷವಾಗಿದೆ.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಬ್ಯಾಂಕ್ ಸಿಬ್ಬಂದಿ, ಸಾರ್ವಜನಿಕರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬ್ಯಾಂಕಿಗೆ ಆಗಮಿಸಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜಕೀಯ ಮಾಡೋದಕ್ಕೆ ಪಕ್ಷ ಇದೆ. ಇದು ರಾಜಕೀಯ ಮಾಡುವ ಕ್ಷೇತ್ರವಲ್ಲ. ಸೇವೆ ಮಾಡುವ ಕ್ಷೇತ್ರ. ರೈತರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಅಧ್ಯಕ್ಷ-ಉಪಾಧ್ಯಕ್ಷರಿಬ್ಬರು ರೈತರ ಕಲ್ಯಾಣ-ಅಭಿವೃದ್ದಿ ಬಗ್ಗೆ ಮಾತನಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments