Thursday, July 2, 2026
Homeಕ್ರೈಮ್ಹಾಸನ: ಡಿವೈಡರ್‌ʼಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ!

ಹಾಸನ: ಡಿವೈಡರ್‌ʼಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ!

Telegram Group
Join Now

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿಗೆ ಆಹುತಿಯಾಗಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರಿಗೆ ತೀವರ ಗಾಯಗಳಾಗಿವೆ.

ಹ್ಯುಂಡೈ ಐ-20 ಕಾರು ಅತಿ ವೇಗವಾಗಿ ಚಲಿಸುತ್ತಿತ್ತು. ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಲವು ಬಾರಿ ಉರುಳಿ ಪಕ್ಕದ ಲೇನ್‌ಗೆ ಬಿದ್ದಿದೆ. ವಿದ್ಯುತ್ ಕಂಬವೂ ನೆಲಸಮವಾಗಿದೆ

ಅಪಘಾತದ ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಹುತೇಕ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರು ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸಹಕರಿಸಿದ್ದಾರೆ.

ಪ್ರಕರಣ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments