Saturday, February 7, 2026
Homeಕ್ರೈಮ್ಮೂಡಿಗೆರೆಯಲ್ಲಿ ಅಕ್ರಮ ಗೋ ಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆಯಲ್ಲಿ ಅಕ್ರಮ ಗೋ ಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋವುಗಳ ಅಕ್ರಮ ಸಾಗಾಟವನ್ನು ತಡೆಯುವಲ್ಲಿ ಮೂಡಿಗೆರೆ ತಾಲ್ಲೂಕಿನ ಬಜರಂಗದಳ ಕಾರ್ಯಕರ್ತರು ಯಶಸ್ವಿಯಾಗಿದ್ದು, ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ

ಬಣಕಲ್ ನ ಭಾರತಿಬೈಲ್ ಗ್ರಾಮದ ಕಡೆಯಿಂದ ಅಕ್ರಮ ಗೋವುಗಳನ್ನು ತುಂಬಿಕೊಂಡುಬಂದ ವಾಹನವನ್ನು ಮುದ್ರೆಮನೆ ಸಮೀಪ ಬಜರಂಗದಳ ಕಾರ್ಯಕರ್ತರು ತಡೆದಿದ್ದಾರೆ ಪಿಕಪ್ ನಲ್ಲಿ ಅಕ್ರಮವಾಗಿ 5 ಗೋವುಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ಬಜರಂಗದಳ ಘಟಕದ ತಂಡ ಜಾಗೃತರಾಗಿ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದಾಗ ಗೋ ಸಾಗಾಣಿಕೆದಾರರು ವಾಹನವನ್ನು ವೇಗವಾಗಿ ಚಲಾಯಿಸಿಸಲು ಮುಂದಾಗಿದ್ದಾರೆ. ಈ ವೇಳೆ . ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್‌ ನನ್ನು ಅಡ್ಡಗಟ್ಟಿ ವಾಹನ ಸಹಿತ 5 ಗೋವುಗಳನ್ನು ಪೋಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾದರು.

ವಾಹನ ಮತ್ತು ಗೋವುಗಳನ್ನು ಮೂಡಿಗೆರೆ ಪೋಲಿಸರ ವಶಕ್ಕೆ ನೀಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ ಎಂದು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಗೋಹತ್ಯೆ ಮತ್ತು ಕಳ್ಳಸಾಗಾಣಿಕೆ ತಡೆಗಟ್ಟಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತಾಲೂಕಿನ ಬಣಕಲ್, ಹಾಂದಿ, ಮೂಡಿಗೆರೆ ಪಟ್ಟಣಗಳಲ್ಲಿ ಸಂತೆಯ ದಿನದಂದು ಗೋ ಮಾಂಸ ಮಾರಾಟ ಮಾಡುತ್ತಿದ್ದು ಪೊಲೀಸರು ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!