Saturday, February 7, 2026
Homeಜಿಲ್ಲಾಸುದ್ದಿಚಾರ್ಮಾಡಿ ಅರಣ್ಯ ಬೆಂಕಿ ಸಂಪೂರ್ಣ ಹತೋಟಿಗೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೇಶ್ವರ ಸ್ವಾಮಿ ಸ್ಥಳ ಪರಿಶೀಲನೆ

ಚಾರ್ಮಾಡಿ ಅರಣ್ಯ ಬೆಂಕಿ ಸಂಪೂರ್ಣ ಹತೋಟಿಗೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೇಶ್ವರ ಸ್ವಾಮಿ ಸ್ಥಳ ಪರಿಶೀಲನೆ

ಮೂಡಿಗೆರೆ: ದಕ್ಷಿಣ ಕನ್ನಡ–ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಮೂಡಿಗೆರೆ ಅರಣ್ಯ ವಲಯದಲ್ಲಿ ಸಂಭವಿಸಿದ್ದ ಭಾರೀ ಅಗ್ನಿ ಅವಘಡವನ್ನು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಹತೋಟಿಗೆ ತಂದಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗಾಳಿಯ ವೇಗ ಹೆಚ್ಚಿದ್ದರಿಂದ ಬೆಂಕಿ ಕ್ಷಿಪ್ರವಾಗಿ ಹರಡಿದ್ದು, ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಭೀತಿ ಉಂಟಾಗಿತ್ತು. ಮಾಹಿತಿ ಪಡೆದ ತಕ್ಷಣ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಶಿವರಾತ್ರೇಶ್ವರ ಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ವಲಯ ಅರಣ್ಯ ಅಧಿಕಾರಿಗಳಾದ ರಂಜಿತ್ ಮತ್ತು ಅಶ್ವಥ್, ಗಸ್ತು ಅರಣ್ಯ ಪಾಲಕರಾದ ಅಭಿಜಿತ್, ಉಮೇಶ್ ಹಾಗೂ ಸುರೇಶ್ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ನಿರಂತರ ನಿಗಾ ವಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!