Wednesday, August 12, 2026
Homeಕ್ರೈಮ್ಚಿಕ್ಕಮಗಳೂರು: ಹಣಕ್ಕಾಗಿ ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ಗಲಾಟೆ!Video Viral

ಚಿಕ್ಕಮಗಳೂರು: ಹಣಕ್ಕಾಗಿ ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ಗಲಾಟೆ!Video Viral

Telegram Group
Join Now

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ ಕೆಡಿಸಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ನಗರದ ಪ್ರಸಿದ್ಧ ರಂಗಣ್ಣನ ಛತ್ರದಲ್ಲಿ ಬುಧವಾರ ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದ ವೇಳೆ ಇಬ್ಬರು ಮಂಗಳಮುಖಿಯರು ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಂಪ್ರದಾಯದಂತೆ ಮದುವೆ ಮನೆಯವರು ಅವರಿಗೆ 500 ರೂಪಾಯಿ ಹಣ ನೀಡಲು ಮುಂದಾಗಿದ್ದಾರೆ. ಆದರೆ, 500 ರೂಪಾಯಿ ಪಡೆಯಲು ನಿರಾಕರಿಸಿದ ಮಂಗಳಮುಖಿಯರು, ಬರೋಬ್ಬರಿ 10,000 ರೂಪಾಯಿ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮಂಗಳಮುಖಿಯರ ಈ ಅಸಭ್ಯ ವರ್ತನೆಯನ್ನು ಕಂಡು ಅಲ್ಲಿದ್ದ ಕೆಲವರು ಪ್ರಶ್ನೆ ಮಾಡಲು ಮುಂದಾದಾಗ, ಅವರ ವಿರುದ್ಧವೂ ಕಿಡಿಕಾರಿದ್ದಾರೆ. ‘ದಮ್ಮಿದ್ದರೆ ಹೊರಗೆ ಬಾ, ನಿನ್ನನ್ನು ನೋಡಿಕೊಳ್ಳುತ್ತೇವೆ’ ಎಂದು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮದುವೆ ಮಂಟಪದಲ್ಲಿ ಗದ್ದಲ ಸೃಷ್ಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments