ಕೊಪ್ಪ: ಕಾಡುಕೋಣದ ದಾಳಿಯಿಂದ ಮಹಿಳೆಯೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭಂಡಿಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಸಮೀಪದ ಗುಡ್ಡೆಕೊಪ್ಪದಲ್ಲಿ ನಡೆದಿದೆ.

ಹೌದು .. ಕಮಲಮ್ಮ ಎಂಬುವರು ತೋಟದಿಂದ ಹುಲ್ಲು ತರಲು ಹೋದಾಗ ಈ ಅನೀರಿಕ್ಷಿತ ಘಟನೆ ನಡೆದಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗಾಯಾಳು ಕಮಲಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಸುಧಾರಿಸಿಕೊಳ್ಳುತ್ತಿದ್ದಾರೆ.
