Friday, February 13, 2026
Homeಸ್ಪೋರ್ಟ್ಸ್RCB ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ಪಂದ್ಯ ನಡೆಯಲು ರಾಜ್ಯ ಸರ್ಕಾರ ಒಪ್ಪಿಗೆ

RCB ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ಪಂದ್ಯ ನಡೆಯಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌. ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್‌  ಪಂದ್ಯ ಆಯೋಜಿಸಲು  ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ

ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಸರ್ಕಾರ ಅನುಮತಿ ನೀಡಿದೆ. ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತಿನೊಂದಿಗೆ ಒಪ್ಪಿಗೆ ನೀಡಿದೆ.

ಕ್ಯಾಬಿನೆಟ್‌ ಸಭೆಗೂ ಮೊದಲು ವಿಧಾನಸೌಧದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ನೇತೃತ್ವದ ಕಮಿಟಿ, ಕೆಎಸ್‌ಸಿಎ, ಆರ್‌ಸಿಬಿ ಮಂಡಳಿ ಸದಸ್ಯರು ಭಾಗಿಯಾಗಿದ್ದರು.

ಗೃಹ ಇಲಾಖೆ ಕಮಿಟಿ ಸಿದ್ಧಪಡಿಸಿರುವ ವರದಿಯ ಆಧಾರದ ಮೇಲೆ ಪಂದ್ಯ ಆಯೋಜನೆ ಮಾಡಲು ನಿರ್ಧಾರ ಮಾಡಲಾಗಿದೆ. ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗ ಕೆಎಸ್‌ಸಿಎ ಈಗ ಮುಂದಾಗಿದೆ.

ಅಂಬುಲೆನ್ಸ್‌ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ.

ಈ ಬಾರಿಯ ಐಪಿಎಲ್ ಮಾರ್ಚ್ 21 ರಂದು ಪ್ರಾರಂಭವಾಗುವ ಸಾಧ್ಯತೆಯಿದೆ. ಫೆಬ್ರವರಿ ಕೊನೆಯಲ್ಲಿ ಐಪಿಎಲ್‌ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!