ಚಿಕ್ಕಮಗಳೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ 3 ಲಕ್ಷ ರೂ ಮೌಲ್ಯದ 5 ಕೆಜಿ 850 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ನರಸಿಂಹರಾಜಪುರ ತಾಲೂಕು ಕಟ್ಟಿನ ಮನೆಯ ಹಾಲಿ ಮಾಗಡಿ ತಾಲೂಕು ಸೋಲೂರು ವಾಸಿ ವಿಜಯಕುಮಾರನನ್ನು ಬಂಧಿಸಲಾಗಿದೆ.
ಆರೋಪಿಯಿಂದ ಚಿಕ್ಕಮಗಳೂರು ನಗರದ ರೈಲ್ವೆ ಸ್ಟೇಷನ್ ಸಮೀಪ 5 ಕೆಜಿ 850 ಗ್ರಾಂ ತೂಕವುಳ್ಳ ಅಂದಾಜು 3,00,000/- ರೂ ಮೌಲ್ಯದ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ನಗರದ ಠಾಣೆ ಇನ್ಸ್ ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್, ಪಿಎಸ್ ಐಗಳಾದ ಶಂಭುಲಿಂಗನಗೌಡ, ಧನರಾಜ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
