Saturday, February 14, 2026
Homeಕ್ರೈಮ್ಕಳಸ: ಭದ್ರಾ ನದಿಯಲ್ಲಿ ಈಜಲು ತೆರಳಿ ಇಬ್ಬರು ಯುವಕರು ನೀರುಪಾಲು!

ಕಳಸ: ಭದ್ರಾ ನದಿಯಲ್ಲಿ ಈಜಲು ತೆರಳಿ ಇಬ್ಬರು ಯುವಕರು ನೀರುಪಾಲು!

ಕಳಸ: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ.

ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ದೈವಿಗಳು. ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು. ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಗೆ ಬಂದಿದ್ದ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿಯ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಲಿರುವ ಪೊಲೀಸರು ನಾಳೆ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!