Sunday, July 12, 2026
Homeಜಿಲ್ಲಾಸುದ್ದಿಹಾಸನ: ಹೊಳೆನರಸೀಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆಗೆ ಸಚಿವ ಕೃಷ್ಣಭೈರೇಗೌಡ ಭೇಟಿ: ಮಕ್ಕಳ ಜೊತೆ ಬಿಸಿಯೂಟ ಸೇವನೆ!

ಹಾಸನ: ಹೊಳೆನರಸೀಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆಗೆ ಸಚಿವ ಕೃಷ್ಣಭೈರೇಗೌಡ ಭೇಟಿ: ಮಕ್ಕಳ ಜೊತೆ ಬಿಸಿಯೂಟ ಸೇವನೆ!

Telegram Group
Join Now

ಹಾಸನ: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಶಾಲಾ ಮಕ್ಕಳ ಜೊತೆ ಅವರು ಬಿಸಿಯೂಟ ಸವಿದಿದ್ದಾರೆ.

ಚನ್ನಪಟ್ಟಣ ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಬಂದಿದ್ದ ರೋಗಿಗಳನ್ನು ವಿಚಾರಿಸಿದರು. ದಿನಾಂಕ ಮೀರಿದ ಔಷಧಿಗಳನ್ನು ಪೂರೈಕೆ ಆಗುವುದನ್ನು ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ? ನೀವು ಔಷಧಿ ತೆಗೆದುಕೊಳ್ಳುವಾಗ ಅದರ ಅವಧಿ ಮುಗಿಯಲು ಇನ್ನೂ ಒಂದು ವರ್ಷ ಅವಧಿ ಇರಬೇಕು. ಈ ಬಗ್ಗೆ ಆನ್‍ಲೈನ್ ವ್ಯವಸ್ಥೆ ಮಾಡಿದ್ದೀರಾ? ಏನಾದರೂ ಆ ರೀತಿ ಖರೀದಿ ಮಾಡಿದರೆ ಯಾರು ಹೊಣೆ ಎಂದು ಆಸ್ಪತ್ರೆ ಸಿಬ್ಬಂದಿಗೆ ಪ್ರಶ್ನಿಸಿದರು.

ಇಡೀ ಆಸ್ಪತ್ರೆಯನ್ನು ಪರಿಶೀಲಿಸಿದರು. ಬಳಿಕ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿ ತೆರಳಿದರು. ನಂತರ ತಾಲೂಕು ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಸಚಿವರ ಬಳಿ ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು. ಸಚಿವರ ಜೊತೆ ಶಾಸಕ ಸಿ.ಎನ್.ಬಾಲಕೃಷ್ಣ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಹಾಗೂ ಸಿಇಒ ಪೂರ್ಣಿಮಾ ಸಾಥ್ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments