ಹಾಸನ: ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೆ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಹಾಸನ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಹಾಗೆ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು.
ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ಇನ್ನೂ, ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಸಮಯದಲ್ಲಿ ಹೆಚ್ಚುವರಿ ಟ್ರಿಪ್‌ಗಳ ಅಗತ್ಯವಿದ್ದರೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಮ್ಮತಿಸಿದ್ದಾರೆ.ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಅವಕಾಶ ಕಲ್ಪಿಸಲಾಗಿದೆ ಈ ಸೌಲಭ್ಯವು ಹಾಸನ ನಗರ ಮಾತ್ರವಲ್ಲದೆ, ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನ್ವಯಿಸಲಿದ್ದು, ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ತಲುಪಲು ಸಹಕಾರಿಯಾಗಲಿದೆ.
