Saturday, July 11, 2026
Homeಕ್ರೈಮ್ಶಂಕರಪುರ: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಯುವಕರು ವೃದ್ಧೆಯ ಸರ ಕಸಿದು...

ಶಂಕರಪುರ: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಯುವಕರು ವೃದ್ಧೆಯ ಸರ ಕಸಿದು ಪರಾರಿ

Telegram Group
Join Now

ಶಿರ್ವ: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯವಕರ ತಂಡವೊಂದು ವೃದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಗ್ಗೆ ಶಂಕರಪುರದಲ್ಲಿ ನಡೆದಿದೆ.

ಹೆಲೆನ್ ಡಿಸೋಜಾ (70) ಸರ ಕಳೆದುಕೊಂಡ ವೃದ್ಧ ಮಹಿಳೆ. ಶನಿವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಈಕೆ ಮನೆಯಲ್ಲಿರುವಾಗ ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಯುವಕರ ತಂಡ ಆಕ್ಕ ಪಕ್ಕದ ಮನೆಯವರ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮಹಿಳೆಯ ಮೊಬೈಲ್ ನಂಬ‌ರ್ ಕೇಳಿ ಬರೆಯುತ್ತಿದ್ದಂತೆ ಒಬ್ಬಾತ ಮಹಿಳೆಯ ಕೊರಳಲ್ಲಿದ್ದ ಸುಮಾರು 3 ಪವನ್ ತೂಕದ ಚಿನ್ನದ ಸರವನ್ನು ಕಸಿದು ಮನೆಯ ಕಂಪೌಂಡ್ ಹಾರಿದ್ದಾನೆ. ಉಳಿದ ಇಬ್ಬರು ಈತನೊಂದಿಗೆ ಸೇರಿ ಬೈಕ್ ನಲ್ಲಿ ಪರಾರಿಯಾಗಿದ್ದಾರೆ.

ಶಿರ್ವ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಿಸಿ ಫೂಟೇಜ್ ಲಭ್ಯವಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments