Monday, July 27, 2026
Homeಕ್ರೈಮ್ಕೊಪ್ಪ: ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಪ್ರಾಣಾಪಾಯದಿಂದ ಪಾರು!

ಕೊಪ್ಪ: ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಪ್ರಾಣಾಪಾಯದಿಂದ ಪಾರು!

Telegram Group
Join Now

ಕೊಪ್ಪ: ತಾಲೂಕಿನ ಹರಿಹರಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಪ್ಪ ಘಾಟಿಯಲ್ಲಿ ಅಕ್ಕಿ ಮೂಟೆಗಳನ್ನ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಶಿವಮೊಗ್ಗದಿಂದ ಶೃಂಗೇರಿ ಕಡೆ ಸಂಚರಿಸುತ್ತಿದ್ದ ಲಾರಿಯೂ ಘಾಟಿ ಪ್ರದೇಶದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದ್ದು ಲಾರಿ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ಚಾಲಕ ಮತ್ತು ಕ್ಲೀನರ್‌ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಲ್ಲಿ ಪಾರಾಗಿದ್ದಾರೆ.

ಘಟನೆಯಿಂದ ರಸ್ತೆಯುದ್ದಕ್ಕೂ ಅಕ್ಕಿಮೂಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸ್ಥಳಕ್ಕೆ ಹರಿಹರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments