ಚಿಕ್ಕಮಗಳೂರು:ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ನ್ಯಾಯಾಲಯದ ಕಟ್ಟಡದ ಸಂಕೀರ್ಣವನ್ನು ದಲಿತ ಸಂಘಟನೆಗಳ ಒಕ್ಕೂಟ ಸ್ವಾಗತಿಸುತ್ತದೆ, ಕಟ್ಟಡವನ್ನು ಮಾರ್ಚ್ 07ರಂದು ತರಾತುರಿಯಲ್ಲಿ ಉದ್ಘಾಟನೆ ಮಾಡಲು ಹೊರಟಿರುವ ಆಡಳಿತ ವ್ಯವಸ್ಥೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಪ್ರಾರಂಭೋತ್ಸವಕ್ಕೆ ಮುಂದಾಗಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡುತ್ತಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಉಮೇಶ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿ 173 ರಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ನ್ಯಾಯಾಲಯಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಿ ಕೊಡಬೇಕು, ನ್ಯಾಯಾಲಯಕ್ಕೆ ಸರಿಯಾದ ಸಂಪರ್ಕ ರಸ್ತೆಯನ್ನು ಕಲ್ಪಿಸಿಕೊಡಬೇಕು, ಬ್ಯಾಂಕ್, ಅಂಚೆ ಕಚೇರಿ, ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಎಲ್ಲ ಮೂಲಭೂತ ಸೌಕರ್ಯಗಳು ಕಲ್ಪಿಸಿದ ನಂತರ ನೂತನ ನ್ಯಾಯಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪೂರ್ಣೇಶ್, ಕೃಷ್ಣಮೂರ್ತಿ, ರಘು, ಭೀಮಯ್ಯ, ವಿರೂಪಾಕ್ಷ, ಅಶೋಕ್, ಮಂಜುನಾಥ್ ಉಪಸ್ಥಿತರಿದ್ದರು.
