Thursday, September 10, 2026
Homeಆರೋಗ್ಯKarnataka Budjet: ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ‘ಇಂದಿರಾ ಆಹಾರ ಕಿಟ್‌ʼ ವಿತರಣೆ!

Karnataka Budjet: ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ‘ಇಂದಿರಾ ಆಹಾರ ಕಿಟ್‌ʼ ವಿತರಣೆ!

Telegram Group
Join Now

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

2026-27ನೇ ಸಾಲಿನ ಬಜೆಟ್‌ ಮಂಡನೆ ಮಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಐದು ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು

ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈ ಸಾಲಿನಲ್ಲಿ 6,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

ವರದಿ: ಶಾಲಿನಿ ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!