Saturday, March 7, 2026
Homebig breakingKarnataka Budget: ಕ್ರೀಡಾ ಕ್ಷೇತ್ರದಲ್ಲಿ ಬಜೆಟ್​​ನಲ್ಲಿ ಸಿಕ್ಕಿದ್ದೇನು

Karnataka Budget: ಕ್ರೀಡಾ ಕ್ಷೇತ್ರದಲ್ಲಿ ಬಜೆಟ್​​ನಲ್ಲಿ ಸಿಕ್ಕಿದ್ದೇನು

2025-26ರ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕ್ರೀಡೆ ಮತ್ತು ಯುವಜನ ಸೇವೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, “ಗುರಿ-ಒಲಿಂಪಿಕ್” ಯೋಜನೆಯಡಿ 60 ಪ್ರತಿಭಾವಂತ ಕ್ರೀಡಾಪಟುಗಳಿಗೆ ವಾರ್ಷಿಕ ₹10 ಲಕ್ಷದವರೆಗೆ ತರಬೇತಿ, ಗ್ರಾಮೀಣ ಕ್ರೀಡೆಗಳಿಗೆ (ಕಂಬಳ, ಮಲ್ಲಕಂಭ) ಉತ್ತೇಜನ, ಮೈಸೂರು-ಬೆಳಗಾವಿಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರಗಳು ಮತ್ತು ಜಿಲ್ಲಾ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ಪ್ರಮುಖ ಅನುದಾನ ಘೋಷಿಸಲಾಗಿದೆ.

ಸಶಕ್ತ ಕರ್ನಾಟಕ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು.

ಸೈಕ್ಲಿಂಗ್‌ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಿಸಲಾಗುವುದು. ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲಾಗುವುದು. ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯವನ್ನು ವಿರಾಜಪೇಟೆಯಲ್ಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು.

ವರದಿ: ಶಾಲಿನಿ ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!