Saturday, March 7, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕೇವಲ ಚುನಾವಣಾ ಗಿಮಿಕ್ : ಸಂತೋಷ್ ಕೊಟ್ಯಾನ್‌

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕೇವಲ ಚುನಾವಣಾ ಗಿಮಿಕ್ : ಸಂತೋಷ್ ಕೊಟ್ಯಾನ್‌

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕೇವಲ ಚುನಾವಣಾ ಗಿಮಿಕ್ ಆಗಿದ್ದು, ರಾಜ್ಯದ ಯುವಜನತೆಯ ಪಾಲಿಗೆ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕೊಟ್ಯಾನ್‌ ತೀವ್ರವಾಗಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್ ಕೇವಲ ಅಂಕಿ-ಅಂಶಗಳ ಮಾಯಾಜಾಲವಾಗಿದ್ದು ಯುವಜನತೆಗೆ ನಿರಾಸೆ ತಂದ ‘ಶೂನ್ಯ’ ಬಜೆಟ್ ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.



​ಯುವಜನತೆಗೆ ವಂಚನೆ:
​ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದರೂ, ಹೊಸ ಉದ್ಯೋಗ ಸೃಷ್ಟಿಯ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಸ್ಪಷ್ಟವಾದ ದಿಕ್ಸೂಚಿ ಇಲ್ಲ. ​ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯುವಜನಸ್ನೇಹಿ ಯೋಜನೆಗಳಿಗೆ ಈ ಸರ್ಕಾರ ಎಳ್ಳು-ನೀರು ಬಿಟ್ಟಿದೆ.

​ಅಭಿವೃದ್ಧಿ ಕುಂಠಿತ:
​ಕೇವಲ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡುತ್ತಿರುವ ಸರ್ಕಾರ, ಮೂಲಸೌಕರ್ಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದೆ.
​ನಮ್ಮ ಜಿಲ್ಲೆಯ ನೀರಾವರಿ, ರಸ್ತೆ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಮೀಸಲಿಡದಿರುವುದು ಖಂಡನೀಯ.

​ಸಾಲದ ಸುಳಿಯಲ್ಲಿ ರಾಜ್ಯ:
​ಅಭಿವೃದ್ಧಿ ಶೂನ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು, ರಾಜ್ಯವನ್ನು ಸಾಲದ ಸುಳಿಗೆ ದೂಡುತ್ತಿದ್ದಾರೆ.
ಇದು ಮುಂದಿನ ಪೀಳಿಗೆಯ ಮೇಲೆ ದೊಡ್ಡ ಆರ್ಥಿಕ ಹೊರೆಯಾಗಲಿದೆ.

​”ಈ ಬಜೆಟ್‌ನಲ್ಲಿ ರೈತರಿಗೆ ಆಶಾದಾಯಕ ಯೋಜನೆಗಳಿಲ್ಲ, ಯುವಕರಿಗೆ ಉದ್ಯೋಗದ ಭರವಸೆ ಇಲ್ಲ. ಇದು ಕೇವಲ ‘ಅನ್ನಭಾಗ್ಯ’ದ ಹೆಸರಿನಲ್ಲಿ ಯುವಕರ ‘ಭವಿಷ್ಯ ಭಾಗ್ಯ’ವನ್ನು ಕಸಿದುಕೊಳ್ಳುವ ಬಜೆಟ್ ಆಗಿದೆ.” ಎಂದು ಸಂತೋಷ್ ಕೊಟ್ಯಾನ್‌ ಕಿಡಿಕಾರಿದ್ದಾರೆ.

​ಬಜೆಟ್‌ನಲ್ಲಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಮತ್ತು ಯುವಜನತೆಯ ಹಕ್ಕುಗಳಿಗಾಗಿ ಮುಂಬರುವ ದಿನಗಳಲ್ಲಿ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೊಟ್ಯಾನ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!