Saturday, February 7, 2026
Homeಜಿಲ್ಲಾಸುದ್ದಿಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ..!

ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ..!

ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಒಂಟಿಸಲಗ ದಾಳಿ ನಡೆಸಿದೆ.

ಚಿಕ್ಕಮಗಳೂರು; ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಒಂಟಿಸಲಗ ದಾಳಿ ನಡೆಸಿದೆ. ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶ್ರೀಧರ್ ಎಂಬುವವರು ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಗಂಭೀರ ಗಾಯಗೊಂಡಿದ್ದ ಶ್ರೀಧರ್ ರನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶ್ರೀಧರ್ ಮೃತಪಟ್ಟಿದ್ದಾರೆ. ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಒಂದಲ್ಲ ಒಂದು ಅನಾಹುತ ನಡೆಯುತ್ತಲೇ ಇದೆ. ಆನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂಬ ಕೂಗು ಕೇಳಿಬರುತ್ತಲೇ ಇದೆ. ಆದ್ರೆ ಏನೂ ಪ್ರಯೋಜನವಾಗುತ್ತಿಲ್ಲ. ಇದೀಗ ಸಿಟ್ಟಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

https://www.youtube.com/watch?v=6VcL26jQEQg
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!