Monday, March 9, 2026
Homeಸ್ಪೋರ್ಟ್ಸ್T20 World Cup: ಸತತ ಎರಡನೇ ಬಾರಿ ವಿಶ್ವಚಾಂಪಿಯನ್‌ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ!

T20 World Cup: ಸತತ ಎರಡನೇ ಬಾರಿ ವಿಶ್ವಚಾಂಪಿಯನ್‌ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ!

ಅಹಮದಾಬಾದ್‌:  ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್‌ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ ಫೈನಲ್‌ ಪಂದ್ಯದಲ್ಲಿ ಭಾರತ ಸತತ ಎರಡನೇ ಬಾರಿ ವಿಶ್ವಚಾಂಪಿಯನ್‌ ಪಟ್ಟ ಅಲಂಕರಿಸಿದೆ. ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳಿಂದ ಗೆದ್ದ ಭಾರತ ಮೂರನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 5 ವಿಕೆಟ್‌ ನಷ್ಟಕ್ಕೆ 255 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲನ್ನು ಒಪ್ಪಿಕೊಂಡಿತು.

ಇಲ್ಲಿಯವರೆಗೆ ಸತತ ಎರಡು ಟಿ20 ಫೈನಲ್‌ ಪಂದ್ಯವನ್ನು ಯಾವುದೇ ತಂಡ ಜಯಗಳಿಸಿಲ್ಲ. ಆದರೆ ಭಾರತ 2024 ಮತ್ತು 2026 ರಲ್ಲಿ ಜಯಗಳಿಸುವ ಮೂಲಕ ಸತತ ಎರಡನೇ ಬಾರಿ  ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಟಿ20 ವಿಶ್ವಕಪ್‌ ಆತಿಥ್ಯ ವಹಿಸಿದ ತಂಡ ಇಲ್ಲಿಯವರೆಗೆ ಚಾಂಪಿಯನ್‌ ಪಟ್ಟ ಅಲಂಕರಿಸಿರಲಿಲ್ಲ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಯನ್ನು ಆಯೋಜಿಸಿತ್ತು.  ಇಲ್ಲಿಯವರೆಗೆ ಯಾವುದೇ ತಂಡ 3 ಟಿ20 ವಿಶ್ವಕಪ್‌ ಪಂದ್ಯ ಗೆದ್ದಿರಲಿಲ್ಲ. ಆದರೆ 2008, 2024 ಮತ್ತು 2026 ರಲ್ಲಿ ಜಯಿಸುವ ಮೂಲಕ ಭಾರತ ವಿಶ್ವದಾಖಲೆ ಬರೆದಿದೆ. ಇಂಗ್ಲೆಂಡ್‌ 2010, 2022 ರಲ್ಲಿ ಟ್ರೋಫಿ ಗೆದ್ದರೆ ವೆಸ್ಟ್‌ ಇಂಡೀಸ್‌ 2012 ಮತ್ತು 2016 ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು.

ಭಾರತ ಈ ಪಂದ್ಯದಲ್ಲಿ 5 ವಿಕೆಟ್‌ ನಷ್ಟಕ್ಕೆ 255 ರನ್‌ ಹೊಡೆಯಿತು. ಇದು ಟಿ20 ಟೂರ್ನಿಯ ಫೈನಲ್‌ನಲ್ಲಿ ತಂಡವೊಂದು ಬಾರಿಸಿದ ಅತ್ಯಧಿಕ ಮೊತ್ತ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!