Thursday, July 30, 2026
Homeಕ್ರೈಮ್ಚಿಕ್ಕಮಗಳೂರು: ಅಕ್ರಮ ಬೋರ್‌ವೆಲ್ ಲಾರಿಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ

ಚಿಕ್ಕಮಗಳೂರು: ಅಕ್ರಮ ಬೋರ್‌ವೆಲ್ ಲಾರಿಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ

Telegram Group
Join Now

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಬೋರ್‌ವೆಲ್ ಲಾರಿಗಳ ವಿರುದ್ಧ ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು.

ಹೌದು .. ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 7 ಲಾರಿಗಳನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಪ್ರತಿಯೊಂದು ಲಾರಿಗೆ ತಲಾ 50 ಸಾವಿರ ರೂಪಾಯಿಗಳಂತೆ ಭಾರೀ ಮೊತ್ತದ ದಂಡವನ್ನು ವಿಧಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಈ ಕಠಿಣ ಕ್ರಮವು ಜಿಲ್ಲೆಯಲ್ಲಿ ಅನಧಿಕೃತವಾಗಿ ಕೊರೆಯಲಾಗುತ್ತಿದ್ದ ಬೋರ್‌ವೆಲ್ ದಂಧೆಗೆ ದೊಡ್ಡ ಪೆಟ್ಟು ನೀಡಿದಂತಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ನಂದಿನಿ ಅವರು, ಲಾರಿ ಮಾಲೀಕರಿಗೆ ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಕೇವಲ ಒಂದು ವಾರದ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಅವಧಿಯೊಳಗೆ ಕಡ್ಡಾಯವಾಗಿ ಸರ್ಕಾರದ ‘7A’ ಅನುಮತಿಯನ್ನು ಪಡೆದುಕೊಂಡು ಕಾರ್ಯಾಚರಣೆ ಮುಂದುವರಿಸಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ. ಒಂದು ವೇಳೆ ನಿಗದಿತ ಸಮಯದೊಳಗೆ ಅಧಿಕೃತ ಪರವಾನಗಿ ಪಡೆಯಲು ವಿಫಲವಾದಲ್ಲಿ ಅಂತಹ ಲಾರಿಗಳನ್ನು ಸರ್ಕಾರಿ ವಶಕ್ಕೆ ಪಡೆದು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ರವಾನಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments