Friday, March 13, 2026
Homeಕ್ರೈಮ್ಚಿಕ್ಕಮಗಳೂರು: ಅಡುಗೆ ಅನಿಲ್ ಕೊರತೆ ನೀಗಿಸುವಂತೆ ಆಗ್ರಹಿಸಿ ಸಿಪಿಐ ಪ್ರತಿಭಟನೆ!

ಚಿಕ್ಕಮಗಳೂರು: ಅಡುಗೆ ಅನಿಲ್ ಕೊರತೆ ನೀಗಿಸುವಂತೆ ಆಗ್ರಹಿಸಿ ಸಿಪಿಐ ಪ್ರತಿಭಟನೆ!

ಚಿಕ್ಕಮಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ದದಿಂದಾಗಿ ಅಡುಗೆ ಅನಿಲ್ ಕೊರತೆ ಎದುರಾಗಿದೆ. ದುಬಾರಿ ಬೆಲೆಗೆ ಅಡುಗೆ ಅನಿಲ ಸಿಲಿಂಡರ್ ಮಾರಾಟ ಮಾಡಲಾಗುತ್ತಿದೆ. ಪೆಟ್ರೋಲ್ ಮತ್ತು ಡಿಸೇಲ್ ಕೊರತೆ ಎದುರಾಗುತ್ತಿದೆ. ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ, ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮವಹಿಸಬೇಕೆಂದು ಆಗ್ರಹಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ಪದಾಧಿಕಾರಿಗಳು ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಕೊರತೆ ಎದುರಾಗದಂತೆ ಸಮಸ್ಯೆ ನಿವಾರಿಸಬೇಕು. ಮಧ್ಯಪ್ರಾಚ್ಯ ದೇಶಗಳ ಯುದ್ಧ ತಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಂದಾಗಬೇಕೆಂದು ಒತ್ತಾಯಿಸಿದರು.

ಭಾರತೀಯ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ರಘು ಮಾತನಾಡಿ, ಅಮೆರಿಕಾ ಇರಾನ್ ದೇಶದ ಯುದ್ಧದಿಂದ ಭಾರತ ದೇಶದಲ್ಲಿ ಅಡುಗೆ ಅನಿಲ ಮತ್ತು ಪೆಟ್ರೋಲ್, ಡಿಸೇಲ್ ಮೇಲೆ ವ್ಯತೀರಿಕ್ತ ಪರಿಣಾಮ ಬೀರುತ್ತಿದೆ. ಅಡುಗೆ ಅನಿಲ ಬುಕ್ಕಿಂಗ್ ತಗೆದುಕೊಳ್ಳುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹಾಸ್ಟೇಲ್, ಶಾಲಾ ಕಾಲೇಜುಗಳನ್ನು ಮುಚ್ಚಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಿಜಿಗಳಲ್ಲಿ ವಾಸಮಾಡುತ್ತಿದ್ದು, ಊಟವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸೆಣ್ಣಪುಟ್ಟ ಕೆಲಸ ಮಾಡುವ ಕೂಲಿ ಕಾರ್ಮಿಕರು, ವ್ಯಾಪರಸ್ಥರು ಎಲ್ಲರಿಗೂ ಏನು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಪಾಕಿಸ್ತಾನ ಮತ್ತು ಭಾರತ ಯುದ್ದ ಸಂದರ್ಭದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯದ್ಧ ನಿಲ್ಲಿಸಿದ್ದೇನೆ ಎಂದು ಜಗತ್ತಿಗೆ ಸಾರಿದ್ದರು. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಮಾತುಕತೆ ನಡೆಸಿ ಯುದ್ಧ ನಿಲ್ಲಿಸಿದರೇ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದು ಹೇಳಿದರು. ವಿಶ್ವಸಂಸ್ಥೆ ಜತೆ ಮಾತುಕತೆ ನಡೆಸಿ, ಯುದ್ದ ನಿಲ್ಲಿಸಿದರೇ ಮಾತ್ರ ಸಾವಿರಾರು ಜನ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಯುದ್ದ ಮುಂದೂವರೆದರೇ ಜನರು ಅನ್ನಕಾಗಿ ಹಹಕಾರ ಪಡುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಕಟ್ಟಡ ಕಾರ್ಮಿಕರ ಸಮಘದ ಕಾರ್ಯದರ್ಶಿ ವಸಂತಕುಮಾರ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕಾ ದೇಶದೊಂದಿಗೆ ಮಾತುಕತೆ ನಡೆಸಿ ಯುದ್ಧ ನಿಲ್ಲಿಸಲು ಮುಂದಾಗಬೇಕು. ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಸರಬರಾಜಿನಲ್ಲಿ ಬಾರಿ ಪರಿಣಾಮ ಬೀರಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಕೋಮುದ್ವೇಷ ಬಿತ್ತುವ ಬಿಜೆಪಿಯವರು ಈ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ. ಯುದ್ಧ ನಿಲ್ಲಿಸುವಂತೆ ಮೋದಿಯವರಿಗೆ ಏಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಅಭಾವ ಸಮಸ್ಯೆಯನ್ನು ನಿವಾರಿಸಬೇಕು. ಇದೇ ಪರಿಸ್ಥಿತಿ ಮುಂದೂವರೆದರೇ ಮುಂದಿನ ದಿನಗಳಲ್ಲಿ ಇಡೀ ಜಿಲ್ಲಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಜಿ.ರಮೇಶ್, ಪ್ರಧಾನ ಕಾರ್ಯದರ್ಶಿ ಸಿ. ಧರ್ಮರಾಜ್, ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್, ತಾಲೂಕು ಸಹ ಕಾರ್ಯದರ್ಶಿ ಸಿ.ಸಿ.ಮಂಜೇಗೌಡ, ಜಿಲ್ಲಾ ಮಂಡಳಿ ಸದಸ್ಯ ಎ.ಜಯಕುಮಾರ್ ಸೇರಿದಂತೆ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!