Thursday, July 30, 2026
Homeಕ್ರೈಮ್ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಕಾಡಾನೆ ಅಟ್ಟಹಾಸ: ಕಾಫಿ ಬೆಳೆಗಾರ ದಾರುಣ ಸಾವು!

ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಕಾಡಾನೆ ಅಟ್ಟಹಾಸ: ಕಾಫಿ ಬೆಳೆಗಾರ ದಾರುಣ ಸಾವು!

Telegram Group
Join Now

ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮಿತಿ ಮೀರಿದ್ದು ಇಂದು ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ.

ಹೌದು .. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಣಪತಿ (49) ಮೃತಪಟ್ಟಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಲ ದಿನ ಹಿಂದಷ್ಟೇ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಇಂದು ಮತ್ತೊಂದು ಬಲಿ ಪಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಅಲ್ಲದೇ ಕಾಡಾನೆ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸಾವುಗಳಾಗ್ತಿರೋದು ಜನರ ನಿದ್ದೆಗೆಡಿಸಿದೆ. ಕಾಫಿ ತೋಟ, ರಸ್ತೆ ಬದಿ ಎಲ್ಲೆಂದರಲ್ಲಿ ಇವುಗಳು ಜನರ ಪ್ರಾಣ ಬಲಿ ಪಡೆಯುತ್ತಿರುವ ಕಾರಣ ಜನರು ಮನೆಯಿಂದ ಹೊರ ಬರಲೂ ಹೆದರಬೇಕಾದ ಪರಿಸ್ಥಿತಿ ಬಂದೊದಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆಗಳ ದಾಳಿ ನಿಯಂತ್ರಣಕ್ಕೆ ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments