Sunday, March 15, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದಲ್ಲಿ ಭಾರೀ ಕಾಡ್ಗಿಚ್ಚು:ಪರಿಸರ ಪ್ರೇಮಿಗಳಲ್ಲಿ ಆತಂಕ

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದಲ್ಲಿ ಭಾರೀ ಕಾಡ್ಗಿಚ್ಚು:ಪರಿಸರ ಪ್ರೇಮಿಗಳಲ್ಲಿ ಆತಂಕ

ಚಿಕ್ಕಮಗಳೂರು: ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು, ಜೀವ ಸಂಕುಲಕ್ಕೆ ಸಂಚಕಾರ ಎದುರಾಗಿದೆ.

ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರೋದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡದೆ. ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ ಮೀಟರ್‌ಗಳಷ್ಟು ದೂರ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಭಯಾರಣ್ಯದಲ್ಲಿನ ಜೀವಸಂಕುಲಕ್ಕೂ ಸಂಚಕಾರ ಎದುರಾಗಿದೆ. ಕಾಡಿಗೆ ಬೆಂಕಿ ಬೀಳುತ್ತಿದ್ದಂತೆ ಪ್ರಾಣಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಾಡಂಚಿನ ಗ್ರಾಮ ಹಾಗೂ ತೋಟಗಳಿಗೆ ಓಡಿರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಅರಣ್ಯ ಇಲಾಖೆಯಲ್ಲಿ ವಾಚರ್‌ಗಳ ಕೊರತೆ ಇರುವುದರಿಂದ ಬೆಂಕಿಯನ್ನು ನಿಯಂತ್ರಿಸಲು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೇಸಿಗೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯ ಇಲಾಖೆ ಫೈರ್ ಲೈನ್‌ಗಳನ್ನು ಮಾಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

ಮುತ್ತೋಡಿ ಭಾಗದ ಜೇನುಕಲ್ಲುಗಿರಿ, ಕಾಗೆಮನೆಗಿರಿ ಹಾಗೂ ಗೆಸ್ಟ್ ಹೌಸ್ ರಸ್ತೆಯ ಭಾಗಗಳಲ್ಲಿ ಫೈರ್ ಲೈನ್ ಮಾಡದಿರುವುದು ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ತಕ್ಷಣವೇ ಹೆಚ್ಚಿನ ಸಿಬ್ಬಂದಿ ಹಾಗೂ ಅಗ್ನಿ ನಿಯಂತ್ರಣ ಸಾಧನಗಳನ್ನು ನಿಯೋಜಿಸಿ ಕಾಡ್ಗಿಚ್ಚನ್ನು ಸಂಪೂರ್ಣವಾಗಿ ನಂದಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!