Saturday, August 8, 2026
Homeಕ್ರೈಮ್ಚಿಕ್ಕಮಗಳೂರು: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ!

ಚಿಕ್ಕಮಗಳೂರು: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ!

Telegram Group
Join Now

ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್‌ ಎಂಬುವರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ.

ಹೌದು .. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ಎಂಬುವರು  11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿ ನೇಣಿಗೆ ಶರಣಾಗಿದ್ದಾರೆ.

ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ.ಫೈನಾನ್ಸ್‌ನಲ್ಲಿ ಸಾಲ ಮಾಡಿರುವೆ, ಸಂಬಳ ನೀಡದಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮಿಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೂ ಕಿರುಕುಳ ನೀಡುತ್ತಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲವರು ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments