ಮೂಡಿಗೆರೆ: ಪಿ.ಎಂ. ಶ್ರೀ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕರ್ತವ್ಯ ನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಹಾಗೂ ಪ್ರಕಾಶ್ ಬಕ್ಕಿ ಮಾತನಾಡಿ ಪಿಎಂಶ್ರೀ ಯೋಜನೆ ಅಡಿಯಲ್ಲಿ ಎರಡು ಶಾಲೆಗಳಿದ್ದು ಅದರಲ್ಲಿ ಈ ಶಾಲೆಯೂ ಒಂದಾಗಿದ್ದು ಇದು ಪ್ರಧಾನ ಮಂತ್ರಿಗಳ ಕನಸಿನ ಶಾಲೆಯಾಗಿದೆ. ಬಡವರಿಗೆ ಇರುವ ಶಾಲೆಯಾಗಿದ್ದು ಬಡ ಕುಟುಂಬದ ಹಾಗೂ ಮಧ್ಯಮ ವರ್ಗದ ಜನರು ಇಂತಹ ಶಾಲೆಗಳ ಅನುಕೂಲ ಪಡೆಯಬೇಕು. ಏಕೆಂದರೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ಸರ್ಕಾರಿ ಶಾಲೆ ಬೆಳೆದಿದ್ದು ಇಲ್ಲಿನ ಸೌಕರ್ಯ ಬೇರೆಲ್ಲೂ ಸಿಗುತ್ತಿಲ್ಲ ಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಇದ್ದು ಇಂತಹ ಕೀಳರಿಮೆ ಹೋಗಲಾಡಿಸಲು ನಾವೆಲ್ಲ ಪಣ ತೊಡಬೇಕು. ಖಾಸಗಿ ಶಾಲೆಗಳು ಶಿಕ್ಷಣ ವ್ಯವಸ್ಥೆಯನ್ನು ವ್ಯಾಪಾರ ವಾಗಿಸಿದ್ದು, ನಿಜಕ್ಕೂ ಅಘಾತಕಾರಿ ವಿಚಾರವಾಗಿದೆ. ಮಕ್ಕಳ ಸದೃಢ ಶಿಕ್ಷಣಕ್ಕೆ ಸರ್ಕಾರಿ ಶಾಲೆಗೆ ಮಾತ್ರ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಾಧ್ಯಯ ನೆಮರಾಜ್ ಮಾತನಾಡಿ ಶಾರದಾ ಪೂಜೆಯ ಮಹತ್ವ ತಿಳಿಸಿ 1980 ರಲ್ಲಿ ಆರಂಭವಾದ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಕಲಿತು ಅನೇಕ ದೊಡ್ಡ ಹುದ್ದೆಗಳಲ್ಲಿ ಇರುವುದು ಹೆಮ್ಮೆಯ ವಿಚಾರವಾಗಿದೆ
ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸೋದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದು. ಹೆಚ್ಚಿನ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ತಿಳಿಸಿ., ವಿದ್ಯಾರ್ಥಿಗಳಿಗೆ ಮುಂದಿನ ಜೀವನ ಉಜ್ವಲ ವಾಗಿರಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜೊತೆಗೆ ವಿಜ್ಞಾನ ದಿನಾಚರಣೆ ಪ್ರಯುಕ್ತ ಅಯೋಜಿಸಿದ್ದ ಚಟುವಟಿಕೆ ನಡೆಸಲಾಗಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೆಳೆಯುವಂತಾಗಿದ್ದವು.
ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ ಎಸ್,ಡಿ,ಎಂ,ಸಿ ಅಧ್ಯಕ್ಷರಾದ ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವಿ, ಸದಸ್ಯರಾದ ರೂಪ, ರಾಜೇಶ್ವರಿ, ಉಮಾ, ಅಕ್ಷತ, ಮಂಜುಳಾ, ಜೋಹಲ್ ತಾಜ್ ಸೇರಿದಂತೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಧಾಕರ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಕಾರ್ಯಕ್ರಮವನ್ನು ಸಮರ್ಪಕವಾಗಿ ನಡೆಸಿಕೊಟ್ಟರು. ಪೋಷಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಒಟ್ಟಿನಲ್ಲಿ ಈ ಕಾರ್ಯಕ್ರಮವು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದಕ್ಕೂ ಕಡಿಮೆ ಇಲ್ಲವೆಂಬುದನ್ನು ತೋರಿಸಿಕೊಟ್ಟಿದ್ದು, ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಯಿತು.
ವರದಿ: ಪುನೀತ್ ಕಡಿದಾಳು
9483811948
