Saturday, August 8, 2026
Homeರಾಜಕೀಯಮಾತೃಪಕ್ಷಕ್ಕೆ ಮರಳಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

ಮಾತೃಪಕ್ಷಕ್ಕೆ ಮರಳಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

Telegram Group
Join Now

Janardhana Reddy joined BJP;ಬೆಂಗಳೂರು; ಮಾಜಿ ಸಚಿವ, ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರು ಇಂದು ಮರಳಿ ಮಾತೃಪಕ್ಷಕ್ಕೆ ಸೇರಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಶಾಲು ಹೊದಿಸಿ ಜನಾರ್ದನ ರೆಡ್ಡಿಯನ್ನ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪಕ್ಷಕ್ಕೆ ಸ್ವಾಗತಿಸಿದರು. ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಕೂಡ ಇದೇ ವೇಳೆ ಬಿಜೆಪಿ ಸೇರ್ಪಡೆಯಾದರು.

ಇನ್ನು ಇದಕ್ಕೂ ಮೊದಲೇ ಪತ್ನಿ, ಮಗಳು ಹಾಗೂ ಮೊಮ್ಮಗಳ ಜೊತೆ ಬಿ ಎಸ್ ವೈ ಅವರನ್ನು ಭೇಟಿಯಾದ ಜನಾರ್ದನ ರೆಡ್ಡಿ ಕೆಲಹೊತ್ತು ಮಾತುಕತೆ ನಡೆಸಿದರು.

ಇನ್ನು ರೆಡ್ಡಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.‌ ಯಡಿಯೂರಪ್ಪ, ಜನಾರ್ದನ ರೆಡ್ಡಿ ಆಪ್ತ ಸ್ನೇಹಿತ ಮಾಜಿ ಸಚಿವ ಬಿ ಶ್ರೀರಾಮುಲು, ಮಾಜಿ ಸಚಿವ ಸಿ ಟಿ ರವಿ, ಸಂಸದ ಪಿ ಸಿ ಮೋಹನ್, ಹಾಗೂ ಇತರರು ಉಪಸ್ಥಿತರಿದ್ದರು,

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments