Friday, March 20, 2026
Homeಕ್ರೈಮ್ಕಳಸ: ಯುಗಾದಿ ಹಬ್ಬದ ದಿನವೇ ದೇವಸ್ಥಾನದ ಮುಂದೆ ವಾಮಾಚಾರ: ಕಾಲಭೈರವನ ಮುಂದೆಯೇ ಮಾಟ ಮಂತ್ರ!

ಕಳಸ: ಯುಗಾದಿ ಹಬ್ಬದ ದಿನವೇ ದೇವಸ್ಥಾನದ ಮುಂದೆ ವಾಮಾಚಾರ: ಕಾಲಭೈರವನ ಮುಂದೆಯೇ ಮಾಟ ಮಂತ್ರ!

ಕಳಸ:ಯುಗಾದಿ ಸಂಭ್ರಮದ ನಡುವೆ ಭೀತಿ ಮೂಡಿಸುವ ಘಟನೆ ನಡೆದಿದೆ. ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.

ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಗಿದೆ ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.

ತೆಂಗಿನಕಾಯಿ, ಅರಿಶಿನ, ಕುಂಕುಮ, ನಾಣ್ಯ, ನಿಂಬೆ ಹಣ್ಣು ಸೇರಿದಂತೆ ಹಲವು ವಸ್ತುಗಳನ್ನ ಬಳಕೆ ಮಾಡಲಾಗಿದೆ. ದೇವಾಲಯದ ಮುಂಭಾಗದಲ್ಲಿ ನಾಲ್ಕು ಕಲ್ಲುಗಳನ್ನ ಇಟ್ಟು ಪೂಜೆ ಮಾಡಲಾಗಿದೆ. ಹಬ್ಬದ ದಿನ ಪೂಜಾ ಕೈಂಕರ್ಯ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡೋಣ ಅಂತಾ ಮುಂಜಾನೆ ಬಂದ ಅರ್ಚಕರು ವಾಮಾಚಾರ ಕಂಡು ಬೆಚ್ಚಿಬಿದ್ದಿದ್ದಾರೆ.

ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದ್ದಾರೆ. ಅದು ಬಹುತೇಕ ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು ಎನ್ನಲಾಗುತ್ತಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!