Tuesday, August 11, 2026
Homeಕ್ರೈಮ್ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ: ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು!

ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ: ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು!

Telegram Group
Join Now

ದಕ್ಷಿಣ ಕನ್ನಡ: ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಪ್ರಕರಣ ಬೆನ್ನಲ್ಲೇ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿ ಮೇಲಿನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ ಪ್ರಕಾರ, 2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments