ಮೂಡಿಗೆರೆ: ತರುವೆಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಎನ್‌ಸಿಸಿ ಘಟಕದ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಮಾತನಾಡಿ, ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ದೇಶಭಕ್ತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ಸತೀಶ್ ಪ್ರಸಾದ್ ಜೈಸ್ವಾಲ್ ಎನ್‌ಸಿಸಿ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣದ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಇಂತಹ ಚಟುವಟಿಕೆಗಳು ಅವಶ್ಯಕವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಕಚೇರಿ ಸಹಾಯಕರು ಹಾಗೂ ಇತರ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು
ಯಶಸ್ವಿಗೊಳಿಸಿದರು.
