ಚಿಕ್ಕಮಗಳೂರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಮನೋಜ್ ಮತ್ತು ಮೊಹಮ್ಮದ್ ತಯೀಬ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಮಂಜುನಾಥ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ಹಿನ್ನೆಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದಾದ್ಯಂತ ಸ ಕ್ರಿಗೊಳಿಸಲು ಅಖಿಲ ಭಾರತ ಯುವಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಹಾಗೂ ಪ್ರಧಾನ ಕಾರ್ಯ ದರ್ಶಿ ನಿಗಮ್ ಭಂಡಾರಿ ಅನುಮೋದನೆ ಮೇರೆಗೆ ಜಿಲ್ಲಾವಾರು ಕಾರ್ಯಕರ್ತರನ್ನು ನೇಮಕ ಮಾಡಲಾಗು ತ್ತಿದೆ ಎಂದಿದ್ದಾರೆ.

