Tuesday, August 11, 2026
Homeಜಿಲ್ಲಾಸುದ್ದಿಬಣಕಲ್: ಕ್ರೈಸ್ತ ಅಭಿವೃದ್ಧಿ ಸಂಘ & ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಶಿಬಿರ...

ಬಣಕಲ್: ಕ್ರೈಸ್ತ ಅಭಿವೃದ್ಧಿ ಸಂಘ & ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜನೆ!

Telegram Group
Join Now

ಮೂಡಿಗೆರೆ: ​ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘ ,ಮತ್ತು ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಪ್ರಸಿದ್ಧ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ಬಣಕಲ್‌ನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕಂಕನಾಡಿ ಫಾ.ಮುಲ್ಲರ್ ಮೆಡಿಕಲ್ ಕಾಲೇಜು,ಆಸ್ಪತ್ರೆಯ ಸಂಯೋಜಕ ಹಾಗೂ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ ಈ ಶಿಬಿರವು ಮಾರ್ಚ್ 29 ರ ಭಾನುವಾರದಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ಬಣಕಲ್‌ನ ಚರ್ಚ್ ಸಭಾ ಭವನದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಾರ್ವಜನಿಕರಿಗೆ ವೈವಿಧ್ಯಮಯ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಸಾಮಾನ್ಯ ಕಾಯಿಲೆಗಳ ತಪಾಸಣೆಯ ಜೊತೆಗೆ ಇ.ಸಿ.ಜಿ., ಬಿ.ಪಿ. ಹಾಗೂ ಸಕ್ಕರೆ ಕಾಯಿಲೆಯ ಪರೀಕ್ಷೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು. ಸ್ತ್ರೀ ರೋಗ ತಪಾಸಣೆ ಮತ್ತು ಸಂತಾನೋತ್ಪತ್ತಿ ಆರೋಗ್ಯಕ್ಕೆ ಸಂಬಂಧಿಸಿದ ಸಮಾಲೋಚನೆಗಳು ಮಧ್ಯಾಹ್ನ 12.30ರ ನಂತರ ಲಭ್ಯವಿರುತ್ತವೆ. ಇವುಗಳೊಂದಿಗೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿದ್ದಲ್ಲಿ ಕನ್ನಡಕಗಳನ್ನು ನೀಡಲಾಗುವುದು ಹಾಗೂ ಮಕ್ಕಳ ತಪಾಸಣೆ ಮತ್ತು ಚರ್ಮರೋಗ ತಪಾಸಣೆಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

​’ಉತ್ತಮ ಆರೋಗ್ಯ ಉತ್ತಮ ಜೀವನ’ ಧ್ಯೇಯದೊಂದಿಗೆ ಈ ಶಿಬಿರ ಅಯೋಜಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments