ಮೂಡಿಗೆರೆ :ಕೆಲಸಕ್ಕೆ ತೆರಳಿದ ಕಾರ್ಮಿಕ ಮಹಿಳೆ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಗೋಣಿಬೀಡು ಹೋಬಳಿ ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ
ಹೌದು .. ಗೌರಮ್ಮ ಎಂಬುವರು ಇಂದು ಬೆಳಗ್ಗೆ 9 ಘಂಟೆ ಸುಮಾರಿಗೆ ಟಾಟಾ ಎಸ್ಟೇಟ್ ನಲ್ಲಿ ಕಾಫಿ ಬೀಜ ಒಣಕಲು ಹೆರಕುವ ಕೂಲಿ ಕೆಲಸಕ್ಕೆ ತೆರಳಿದ ವೇಳೆ ಏಕಾಏಕಿ ಒಂಟಿ ಸಲಗ ದಾಳಿ ನಡೆಸಿದೆ.

ಈ ವೇಳೆ ಗೌರಮ್ಮ ಎಂಬುವರ ಸೊಂಟ, ಕೈ, ಕಾಲುಗಳಿಗೆ ತೀವ್ರ ಪೆಟ್ಟು ಬಿದಿದ್ದು ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸ್ಥಳೀಯರು ಅರಣ್ಯ ಇಲಾಖೆ ವಿರುದ್ದ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತೆ ಆಗಿದೆ. ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಸಮಸ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಈ ನಡುವೆ ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ.

ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
