Friday, April 3, 2026
Homeಕ್ರೈಮ್ಬೇಲೂರು: ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನ!

ಬೇಲೂರು: ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನ!

ಹಾಸನ: ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾ.22ರಂದು ಬೆಳಿಗ್ಗೆ ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಮಹಿಳೆಯ ಸಂಬಂಧಿ ನೀಡಿದ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್, ಸೋಮ, ಕಿರಣ್, ಆನಂದ್, ಪುನೀತ್, ಪ್ರತಾಪ್, ಪ್ರಸನ್ನ, ನಾಗಾಬೋವಿ, ಮಂಜಾಬೋವಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಗಂಗಾಬೋವಿ, ಶಿವಕುಮಾರ್ ಹಾಗೂ ಇತರರು ಮಹಿಳೆ ಮೇಲೆ ಗುಂಪಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!